Select Your Language

Notifications

webdunia
webdunia
webdunia
webdunia

ಮತ್ತೆ ಅಧಿಕಾರಕ್ಕೆ ಬಂದರೆ ದಲಿತರ ಸಾಲ ಮನ್ನಾ: ಸಿದ್ದರಾಮಯ್ಯ

‌siddaramiah congress dalith ದಲಿತ ಸಿದ್ದರಾಮಯ್ಯ ಕಾಂಗ್ರೆಸ್
bengaluru , ಬುಧವಾರ, 18 ಮೇ 2022 (15:22 IST)
ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬಂದರೆ ದಲಿತರ ಸಾಲಮನ್ನಾ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶೋಷಿತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಸ್ಸಿ/ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣದಲ್ಲೇ ಸಾಲ ಮನ್ನಾ ಮಾಡುವುದಾಗಿ ಹೇಳಿದರು.
ಎಸ್ಸಿ/ಎಸ್ಟಿ ಸಮುದಾಯದ ಅಭಿವೃದ್ಧಿಗೆ ೭೫೯೦ ಕೋಟಿ  ರೂ. ಮೀಸಲಿಡಲಾಗಿದೆ. ಆದರೆ ಬಿಜೆಪಿ ಸರಕಾರ ಈ ಅನುದಾನವನ್ನು ಬೇರೆಯವರಿಗೆ ಬಳಕೆ ಮಾಡಿ ದಲಿತ ಸಮುದಾಯಕ್ಕೆ ಮೋಸ ಮಾಡುತಿದೆ ಎಂದು ಆರೋಪಿಸಿದರು.
ನಿಮ್ಮ ಹಣ ಸರಕಾರ ಬೇರೆಯವರಿಗೆ ಖರ್ಚು ಮಾಡುತ್ತಿದೆ. ಅನ್ಯಾಯ ಆದರೂ ಇದರ ಬಗ್ಗೆ ಯಾಕೆ ಧ್ವನಿ ಎತ್ತುತ್ತಿಲ್ಲ? ಇದು ನಿಮ್ಮ ಸಮುದಾಯಕ್ಕೆ ಮಾಡಿದ ಮೋಸ ಅಲ್ವಾ ಎಂದು ಅವರು ಪ್ರಶ್ನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನೀರು ನುಗ್ಗಿದ ಮನೆಗೆ 25,000 ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ