Publish Date: Fri, 17 Jul 2026 (20:57 IST)
Updated Date: Fri, 17 Jul 2026 (21:02 IST)
ಬೆಂಗಳೂರು: ಈ ವರ್ಷ ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನ 5 ಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಗಡುವನ್ನು ಡಿಸೆಂಬರ್ ವರೆಗೆ ವಿಸ್ತರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಮನವಿಗಳನ್ನು ಸುಪ್ರೀಂ ಕೋರ್ಟ್ ಅನುಮತಿಸಿದೆ.
ಸದ್ಯ ಎಸ್‌ಐಆರ್ ನಡೆಯುತ್ತಿರುವ ಹಿನ್ನೆಲೆ ಸಮಯ ಕೇಳಿದ್ದೆವು. ಸುಪ್ರೀಂ ಕೋರ್ಟ್ ಸಮಯ ಕೊಟ್ಟಿದ್ದು, ಆದೇಶವೇನಿದೆ ಅದರೊಳಗೆ ಚುನಾವಣೆ ನಡೆಸುತ್ತೇವೆ ಎಂದರು.
ಎಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನ ಆ ಟೈಂನೊಳಗೇ ನಡೆಸುತ್ತೇವೆ. ಡಿಸೆಂಬರ್ ಒಳಗೆ ಜಿಬಿಎ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನ ನಡೆಸುತ್ತೇವೆ ಎಂದು ತಿಳಿಸಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ