Publish Date: Sat, 18 Aug 2018 (18:05 IST)
Updated Date: Sat, 18 Aug 2018 (18:08 IST)
ಭೀಕರ ಮಳೆ ರಾಜ್ಯದಲ್ಲಿ ತನ್ನ ಪ್ರಭಾವ ತೋರಿ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಳೆಯ ಕಾರಣದಿಂದಾಗಿ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಸೋಮವಾರಪೇಟೆ, ಕುಶಾಲನಗರ ಹಾಗೂ ವಿರಾಜಪೇಟೆಯ ಸ್ಥಳೀಯ ಸಂಸ್ಥೆ ಚುನಾವಣೆಗೆ ತಡೆ ನೀಡಲಾಗಿದೆ.
ಮಳೆ ಕಡಿಮೆ ಆದ ಬಳಿಕವಷ್ಟೇ ಸಲ್ಲಿಸಿದವರ ನಾಮಪತ್ರ ಪರಿಶೀಲಿಸಿ ಮುಂದಿನ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದ್ದಾರೆ.