ಸಾಲು ಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ

Webdunia
ಬುಧವಾರ, 22 ಜೂನ್ 2022 (20:51 IST)
tree
ಬೆಂಗಳೂರು:ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.
ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ. ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.
ಇದೇ ವೇಳೆ ಮಾತನಾಡಿದ ವಿಶ್ವನಾಥ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಮೇರೆಗೆ ಬಿಡಿಎ ವತಿಯಿಂದ ನಮ್ಮೆಲ್ಲರ ಮಾರ್ಗದರ್ಶಿಯಾಗಿರುವ ಸಾಲು ಮರದ ತಿಮ್ಮಕ್ಕ ಅವರಿಗೆ ನಿವೇಶನ ನೀಡಿರುವುದು ಸಂತೋಷ ತಂದಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments