Publish Date: Mon, 29 Jun 2020 (19:26 IST)
Updated Date: Mon, 29 Jun 2020 (19:27 IST)
ಹೊರ ರಾಜ್ಯಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಬಂದವರಿಂದ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಯಾಗುತ್ತಾ ಎನ್ನುವ ಚರ್ಚೆ ಶುರುವಾಗಿದೆ.
ವಿಧಾನಸೌಧದ ಕ್ಯಾಬಿನೆಟ್ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ನ ತಜ್ಞರು ಸಚಿವರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಕೊರೊನಾ ನಿಗ್ರಹಕ್ಕೆ ಟಾಸ್ಕ್ ಫೋರ್ಸ್ ನೀಡಿದ ಸಲಹೆಗಳನ್ನು ಸರಕಾರ ಪರಿಶೀಲನೆ ನಡೆಸುತ್ತಿದೆ.
ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಪರೀಕ್ಷೆ, ಖಾಸಗಿ ಆಸ್ಪತ್ರೆಗಳ ಬಳಕೆ ಕುರಿತು ಸಭೆಯಲ್ಲಿ ವಿಚಾರ ಪ್ರಸ್ತಾಪವಾಗಿದೆ. ಮತ್ತೆ ಲಾಕ್ ಡೌನ್ ಜಾರಿಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನ ಮಾಡಲಿದ್ದಾರೆ ಎಂದಿದ್ದಾರೆ.
ಈ ನಡುವೆ ಜುಲೈ 6 ರಿಂದ ಮತ್ತೆ ಲಾಕ್ ಡೌನ್ ಜಾರಿಯಾಗಲಿದೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿದೆ.