Daily Horoscope
✕

ಹುಬ್ಬಳ್ಳಿಯಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ

Webdunia
ಭಾನುವಾರ, 10 ಮೇ 2020 (13:45 IST)
ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಾಗಿರುವ ಲಾಕ್ ಡೌನ್ ನಿಂದ ಹುಬ್ಬಳ್ಳಿ ಶಹರ ಹೊರತುಪಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗಿವೆ.

ಸೋಮವಾರ ಮೇ 11 ರಿಂದ ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ವಾಣಿಜ್ಯ, ವಹಿವಾಟುಗಳನ್ನು ನಡೆಸಲು ಅವಕಾಶ ಕಲ್ಪಿಸಲು  ಆದೇಶ ಹೊರಡಿಸಲಾಗುವುದು ಎಂದು ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದ್ದಾರೆ.

ಅಂಗಡಿ ಮತ್ತು ಮುಂಗಟ್ಟುಗಳ ಕಾಯ್ದೆ  ಪ್ರಕಾರ ಸ್ಥಾಪನೆಯಾಗಿರುವ ಎಲ್ಲಾ ಅಗತ್ಯ ವಸ್ತುಗಳ ಪೂರೈಕೆಯ ವಾಣಿಜ್ಯ, ವಹಿವಾಟುಗಳು ಈಗಾಗಲೇ ಜಿಲ್ಲೆಯ ಧಾರವಾಡ, ಕಲಘಟಗಿ, ಅಳ್ನಾವರ, ಕುಂದಗೋಳ, ಅಣ್ಣಿಗೇರಿ ಹಾಗೂ ನವಲಗುಂದ ತಾಲ್ಲೂಕುಗಳಲ್ಲಿ ಪುನರಾರಂಭವಾಗಿವೆ.

ಹುಬ್ಬಳ್ಳಿಯ ಸೀಲ್ ಡೌನ್ ಪ್ರದೇಶ ಹೊರತುಪಡಿಸಿ ಉಳಿದ ಎಲ್ಲಾ ಕಡೆಗಳಲ್ಲೂ  ಕಿರಾಣಿ ಅಂಗಡಿ, ಹೊಟೆಲ್ ಗಳಲ್ಲಿ ಪಾರ್ಸೆಲ್ ಸೇರಿದಂತೆ  ವಿವಿಧ ವ್ಯಾಪಾರ ಚಟುವಟಿಕೆಗಳ ಪ್ರಾರಂಭಕ್ಕೆ ವಾರದ ಎಲ್ಲಾ ದಿನಗಳಲ್ಲಿಯೂ ಅವಕಾಶ ಕಲ್ಪಿಸಿ ಸಮರ್ಪಕ ಆದೇಶ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನದಿಗೆ ಧುಮುಕಿದ ಬೆನ್ನಲ್ಲೇ ಎರಗಿಬಂತು ಬೃಹತ್ ಮೊಸಳೆ: ಮುಂದಾಗಿದ್ದು ಊಹಿಸಲಾಗದ ಘಟನೆ Video

ಝೂ ನೋಡಲು ಹೋದ ನವಜೋಡಿ: ಗಂಡ ಬೈಕ್ ಪಾರ್ಕ್ ಮಾಡಿ ಬರುವಷ್ಟರಲ್ಲಿ ಪ್ರಿಯಕರನ ಜೊತೆ ಎಸ್ಕೇಪ್, ಸಿಸಿಟಿವಿ video viral

ವಿದ್ಯಾರ್ಥಿಯ ಬೋಳು ತಲೆಯನ್ನೇ ತಬಲಾ ಮಾಡಿದ ಶಿಕ್ಷಕ: ವೈರಲ್ ವಿಡಿಯೋ ಬೆನ್ನಲ್ಲೇ ಹೆಡ್‌ಮಾಸ್ಟರ್ ಸಸ್ಪೆಂಡ್ Video

ಬೆಂಗಳೂರು CJP ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಮನೆ ಕೊಡ್ತೀವಿ ಅಂತ ಮಡಿಕೇರಿ ಜನರನ್ನು ಕರೆತಂದ್ರಾ Video

ಜನರು ಗುಳೆ ಹೋಗೋದು ಸಂಪ್ರದಾಯ: ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

ಮುಂದಿನ ಸುದ್ದಿ
Show comments