Select Your Language

Notifications

webdunia
webdunia
webdunia
webdunia

ಲೋಕಸಭಾ ಚುನಾವಣೆಯ ಹಿನ್ನಲೆ; ರಾಜ್ಯದಲ್ಲಿ ಈ ಮೂರು ದಿನಗಳ ಕಾಲ ಮದ್ಯಕ್ಕೆ ಬ್ರೇಕ್ ಹಾಕಿದ ಆಯೋಗ

ಲೋಕಸಭಾ ಚುನಾವಣೆಯ ಹಿನ್ನಲೆ; ರಾಜ್ಯದಲ್ಲಿ ಈ ಮೂರು ದಿನಗಳ ಕಾಲ ಮದ್ಯಕ್ಕೆ ಬ್ರೇಕ್ ಹಾಕಿದ ಆಯೋಗ
ಬೆಂಗಳೂರು , ಮಂಗಳವಾರ, 16 ಏಪ್ರಿಲ್ 2019 (10:30 IST)
ಬೆಂಗಳೂರು : ಚುನಾವಣೆಯ ಬಹಿರಂಗ ಪ್ರಚಾರ ಇಂದು ಮುಕ್ತಾಯವಾಗಲಿದ್ದು , ರಾಜ್ಯದಲ್ಲಿ ಏ. 18 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಬಾರ್ ಬಂದ್ ಮಾಡುವಂತೆ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಅಂದರೆ ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.


ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ಬಳಿಕ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮನೆ ಮನೆ ಪ್ರಚಾರ ನಡೆಸಲಿದ್ದು, ಈ ವೇಳೆ ಮತದಾರರಿಗೆ ನಾನಾ ಆಮಿಷಗಳನ್ನು ಒಡ್ಡುವ ಸಾಧ್ಯತೆಯಿದೆ. ಈ ರೀತಿ ಅಕ್ರಮಗಳನ್ನು ತಡೆಯುವ ಸಲುವಾಗಿ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಇಂದು ಸಂಜೆಯಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲು ಆದೇಶಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಜೆಡಿಎಸ್ ನಾಯಕರ ಆಪ್ತರ ಮೇಲೆ ಐಟಿ ದಾಳಿ