Select Your Language

Notifications

webdunia
webdunia
webdunia
webdunia

Lok Sabha Election result: ಪ್ರಜ್ವಲ್ ರೇವಣ್ಣಗೆ ಸೋಲು, ಮೂವರೂ ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು

Prajwal Revanna

Krishnaveni K

ಬೆಂಗಳೂರು , ಮಂಗಳವಾರ, 4 ಜೂನ್ 2024 (12:50 IST)
ಬೆಂಗಳೂರು: ಬಹುನಿರೀಕ್ಷಿತ ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೋಲು ಅನುಭವಿಸಿದ್ದಾರೆ. ಇಲ್ಲಿ ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಭಾರೀ ಪೈಪೋಟಿ ನೀಡುತ್ತಿದ್ದರು. ಅಂತಿಮವಾಗಿ ಜೆಡಿಎಸ್ ಪ್ರಾಬಲ್ಯ ಕೊನೆಗೊಳಿಸಲು ಶ್ರೇಯಸ್ ಯಶಸ್ವಿಯಾದರು.

ಇನ್ನೊಂದೆಡೆ ಮಂಡ್ಯದಲ್ಲಿ ಜೆಡಿಎಸ್ ಗೆ ಕುಮಾರಸ್ವಾಮಿ ರೂಪದಲ್ಲಿ ಭರ್ಜರಿ ಗೆಲುವು ಸಿಕ್ಕಿದೆ. ಇಲ್ಲಿ ಕುಮಾರಸ್ವಾಮಿ ಭಾರೀ ಅಂತರದ ಗೆಲುವು ಸಾಧಿಸಿದ್ದಾರೆ. ಅತ್ತ ಕೋಲಾರದಲ್ಲೂ ಜೆಡಿಎಸ್ ನ ಮಲ್ಲೇಶ್ ಬಾಬು ಗೆಲುವು ಸಾಧಿಸಿದ್ದಾರೆ. ಇನ್ನೊಂದೆಡೆ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.

ಇನ್ನೊಂದೆಡೆ ಬಳ್ಳಾರಿಯಲ್ಲಿ ಗಣಿದಣಿಗಳ ಪ್ರಾಬಲ್ಯ ಅಂತ್ಯಗೊಳಿಸಿದ್ದು ಕಾಂಗ್ರೆಸ್ ನ ಇ. ತುಕರಾಂ. ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಸೋಲು ಅನುಭವಿಸಿದ್ದಾರೆ. ಆದರೆ ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Lok Sabha Election results: ಗಾಂಧಿನಗರದಲ್ಲಿ ಅಮಿತ್ ಶಾಗೆ ಗೆಲುವು