Webdunia - Bharat's app for daily news and videos

Install App

ರಂಗೇರಿದ ಲೋಕಸಭೆ ಚುನಾವಣೆ: ಬಿಜೆಪಿಯಿಂದ ನೋ ಮೈಕ್, ನೋ ಚೇರ್ಸ್ ಪ್ರಚಾರಾಭಿಯಾನ!

Sampriya
ಗುರುವಾರ, 21 ಮಾರ್ಚ್ 2024 (10:10 IST)
ಬೆಂಗಳೂರು: ದಿನದಿಂದ ದಿನಕ್ಕೆ ಲೋಕಸಭೆ ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಚುನಾವಣೆ  ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಸಣ್ಣಮಟ್ಟಿನ ಜನ ಸಮುದಾಯವನ್ನು ತಲುಪಿ ಪ್ರಚಾರ ಮಾಡುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ನೋ ಮೈಕ್, ನೋ ಚೇರ್ಸ್ ಅಭಿಯಾನ ಹಾಕಿಕೊಂಡಿದೆ.

ತಳಮಟ್ಟದಲ್ಲಿ ಮತದಾರರನ್ನು ತಲುಪುವ ಉದ್ದೇಶದೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಏಪ್ರಿಲ್ 5ರ ಒಳಗೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಚುನಾವಣಾ ಪ್ರಚಾರ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಸ್ತೆ ಬದಿಗಳಲ್ಲಿ, ಸಣ್ಣಪುಟ್ಟ ಹಳ್ಳಿಗಳ ಮರಗಳ ಅಡಿಯಲ್ಲಿ ಅಥವಾ ಮನೆಗಳಲ್ಲಿ ಈ ಅಭಿಯಾನದಡಿ ಚುನಾವಣಾ ಪ್ರಚಾರ ನಡೆಸಲಾಗುತ್ತದೆ. ಒಂದು ಬಾರಿಯ ಸಭೆಯ ವೇಳೆ ಸುಮಾರು ನೂರು ಜನರನ್ನು ತಲುಪುವ ಗುರಿ ಹೊಂದಲಾಗಿದೆ. ‌ಬೃಹತ್‌ ರ‍್ಯಾಲಿಗಳನ್ನು ನಡೆಸುವ ಬದಲು ಸಣ್ಣಪುಟ್ಟ ಸಭೆಗಳನ್ನು ನಡೆಸುವ ಮೂಲಕ ಜನರನ್ನು ತಲುಪುವುದು ಉತ್ತಮ ವಿಧಾನವಾಗಿದೆ. ಈ ಮೂಲಕ ಪ್ರತಿಯೊಬ್ಬರಿಗೂ ನಾವು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಸಣ್ಣ ಮಟ್ಟದ ಸ್ಥಳೀಯ ಚುನಾವಣಾ ಪ್ರಚಾರ ಸಭೆಗಳಿಗೆ ಪಕ್ಷದ ರಾಜ್ಯ ಘಟಕವು 22 ವಿವಿಧ ಘಟಕಗಳನ್ನು ಸ್ಥಾಪಿಸಿದೆ. ಇದರಲ್ಲಿ ರೈತರು, ವಕೀಲರು, ವೈದ್ಯರು ಹಾಗೂ ಕೇಂದ್ರ ಸರ್ಕಾರ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ. ಸ್ಥಳೀಯ ನಾಯಕರ ಸಹಕಾರದೊಂದಿಗೆ ಈ ಹೊಸ ಪ್ರಚಾರದ ಪರಿಕಲ್ಪನೆಯನ್ನು ನಾವು ಸಾಕಾರ ಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಉಜ್ವಲ, ಜಲಜೀವನ್ ಮಿಷನ್ ಹಾಗೂ ಇತರ ಯೋಜನೆಗಳನ್ನು ಮುಂದಿಟ್ಟುಕೊಂಡು ಮಹಿಳಾ ಮತದಾರರ ಬಳಿ ಮತಯಾಚನೆ ಮಾಡಲು ನಿರ್ಧರಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments