Select Your Language

Notifications

webdunia
webdunia
webdunia
webdunia

ಲೋಕಸಭೆ ಉಪಚುನಾವಣೆ ಕದನ: ಪ್ರಮುಖರಿಂದ ಮತದಾನ

ಲೋಕಸಭೆ ಉಪಚುನಾವಣೆ ಕದನ: ಪ್ರಮುಖರಿಂದ ಮತದಾನ
ಬೆಂಗಳೂರು , ಶನಿವಾರ, 3 ನವೆಂಬರ್ 2018 (08:53 IST)
ಬೆಂಗಳೂರು: ಲೋಕಸಭೆಯ ಐದು ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಬೆಳಗ್ಗಿನಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿರುವ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಬೆಳಿಗ್ಗೆಯೇ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಬಳಿಕ ತಂದೆ ಯಡಿಯೂರಪ್ಪ ಹಾಗೂ ಕುಟುಂಬ ಸಮೇತ ಮತದಾನ ಮಾಡಿದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ ಘಟನೆಯೂ ನಡೆದಿದೆ.

ಮಂಡ್ಯ ಕ್ಷೇತ್ರದಲ್ಲಿ ತಾಳಗುಪ್ಪದಲ್ಲಿ ಮತ ಯಂತ್ರದಲ್ಲಿ ದೋಷ ಕಂಡುಬಂದ ಹಿನ್ನಲೆಯಲ್ಲಿ ಇನ್ನೂ ಮತ ಪ್ರಕ್ರಿಯೆ ಆರಂಭವಾಗಿಲ್ಲ. ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಂತಾ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಬಳಿಕ ಮತದಾನ ಮಾಡಲು ತೆರಳಿದ್ದಾರೆ.

ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ತಮ್ಮ ತಂದೆ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಮತದಾನ ಮಾಡಲು ತೆರಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯತಮೆ ಕ್ಯಾನ್ಸರ್ ನಿಂದ ತೀರಿಕೊಂಡ ಬೇಸರದಲ್ಲಿ ಪ್ರಿಯಕರ ಮಾಡಿದ್ದೇನು ಗೊತ್ತಾ?