Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ 30ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ

ಲೋಕಾಯುಕ್ತ

geetha

bangalore , ಮಂಗಳವಾರ, 9 ಜನವರಿ 2024 (15:41 IST)
ಬೆಂಗಳೂರು-ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಮಾಡಿದ್ದು, ಶೋಧ ಕಾರ್ಯ ನಡೆಸಿದ್ದಾರೆ. ಕುಂದಣ ಪಿಡಿಒ ಪದ್ಮನಾಬ್ ಅವರಿ​ಗೆ ಸೇರಿದ​​​​ ಮೂರು ಮನೆ ಮೆನಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ. ಜೊತೆಗೆ ದಾಬಸ್​ಪೇಟೆ ಹಾಗೂ ತುಮಕೂರಿನಲ್ಲಿಯೂ ಪದ್ಮನಾಬ್​ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ರಾಮನಗರ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳ 30 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿಮಾಡಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆ ಬಿಬಿಎಂಪಿ ಅಧಿಕಾರಿ ಮಂಜೇಶ್ ಸಂಬಂಧಿಕರ ಮನೆಗಳ ಮೇಲೆ‌‌ ಲೋಕಾಯುಕ್ತ ದಾಳಿ ನಡೆಸಿದೆ.. ಮಂಡ್ಯದಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮಳವಳ್ಳಿ ತಾಲೂಕಿನ ಹಲಗೂರು ಹಾಗೂ ಗುಂಡಾಪುರದಲ್ಲಿ ದಾಳಿ ಮಾಡಲಾಗಿದೆ.. ಮಂಜೇಶ್ ಸಂಬಂಧಿ ಸುರೇಂದ್ರ ಎಂಬುವವರಿಗೆ ಸೇರಿದ ಎರಡು ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಠಾಣೆಯ ಸಿಬ್ಬಂದಿ ವಿಚಾರಣೆ