Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಚಳಿಬಿಡಿಸಿದ ಲೋಕಾಯುಕ್ತ ಪೊಲೀಸರು: ಏಳು ಭ್ರಷ್ಟ ತಿಮಿಂಗಿಲಗಳಿಗೆ ಶಾಕ್‌

Sampriya
ಶನಿವಾರ, 31 ಮೇ 2025 (14:18 IST)
Photo Courtesy X
ಬೆಂಗಳೂರು: ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಉಡುಪಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್‌ ದಾಳಿ ನಡೆಸಿದೆ. 

 ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶೈಲ ಸುಭಾಷ್ ತತ್ರಾಣಿ, ಬೆಳಗಾವಿ ಸುವರ್ಣ ಸೌಧದ ದೇವರಾಜ್ ಅರಸು ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಬಳ್ಳಾರಿಯ ಕಾರ್ಯಪಾಲಕ ಎಂಜಿನಿಯರ್ ಅಮೀನ್ ಮುಕ್ತಾರ್ ಅಹಮದ್, ದಾವಣಗೆರೆಯ ಶಿಗ್ಗಾಂವಿ ಪಂಚಾಯಿತಿ ಪಿಡಿಒ ರಾಮಕೃಷ್ಣ, ಉಡುಪಿ ಜಿಲ್ಲೆಯ ಕಾರ್ಕಳದ ಮೆಸ್ಕಾಂ ಅಕೌಂಟೆಂಟ್‌ ಗಿರೀಶ್‌ ರಾವ್‌, ಗದಗದ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಗಂಗಾಧರ, ಧಾರವಾಡದ ಪಿಡಬ್ಲುಡಿ ಮುಖ್ಯ ಇಂಜಿನಿಯರ್ ಹೆಚ್.ಸುರೇಶ್ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಜಾಲಾಡಿದ್ದಾರೆ. 

ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿ ಭ್ರಷ್ಟಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಬೆಳಗಾವಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮೂವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಮಯದಲ್ಲಿ ಲೆಕ್ಕವಿಲ್ಲದ ನಗದು ಮತ್ತು ಚಿನ್ನಾಭರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ದಾಖಲೆ ಪರಿಶೀಲನೆ ಮುಂದುವರೆದಿದೆ.

ಗದಗ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಮನೆ ಗಂಗಾಧರ ಶಿರೋಳ ಅವರ ಮನೆ, ಕಚೇರಿ ಹಾಗೂ ಅಳಿಯ, ಭಾವನ ಮನೆಗಳು ಸೇರಿ 6 ಕಡೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಲೋಕಾಯುಕ್ತ ಎಸ್ಪಿ ಹಣಮಂತರಾಯ, ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ, ಬೆಳ್ಳಿ, ವಾಹನಗಳು, ಆಸ್ತಿಪತ್ರಗಳು ದೊರೆತಿದ್ದು ಶೋಧ ಕಾರ್ಯ ಮುಂದುವರಿದಿದೆ.

ಕಲಬುರಗಿ ನಗರದ ಹುಸೇನಿ ಗಾರ್ಡನ್ ಬಡಾವಣೆಯಲ್ಲಿರುವ ಬಳ್ಳಾರಿ ಲೋಕೋಪಯೋಗಿ ಇಲಾಖೆಯ ಸರ್ಕಲ್ ಆಫೀಸ್ ಅಧೀಕ್ಷಕ ಇಂಜಿನಿಯರ್ ಅಮೀನ್‌ ಮುಕ್ತಾರ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿ ಮೂಲದವರೇ ಆಗಿರುವ ಅಮೀನ್ ಮುಕ್ತಾರ್ ಈ ಹಿಂದೆ ಇದೇ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿ ಸಹ ಸೇವೆ ಸಲ್ಲಿಸಿದ್ದಾರೆ. ಇದರ ಜೊತೆಗೆ, ಬಳ್ಳಾರಿ ಮತ್ತು ಬಸವಕಲ್ಯಾಣದಲ್ಲೂ ದಾಳಿ ನಡೆದಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಆರೋಪದ ಅಡಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ.   

ಬಾಗಲಕೋಟೆ ಜಿಲ್ಲಾಡಳಿತ ಕಚೇರಿ ಲೆಕ್ಕಪತ್ರ ವಿಭಾಗದ ಎಫ್‌ಡಿಎ ಶ್ರೀಶೈಲ್ ತತ್ರಾಣಿ ಅವರ ಅಮೀನಗಢ ಪಟ್ಟಣದಲ್ಲಿರುವ ಮನೆ ಹಾಗೂ ಆಭರಣ ಮಳಿಗೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. 

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮ ಪಂಚಾಯತಿ ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ. ಗ್ರಾಮ ಪಂಚಾಯತಿ ಪಿಡಿಓ ರಾಮಕೃಷ್ಷಪ್ಪ ಗುಡಗೇರಿ ಎಂಬ ಪಿಡಿಓ ಸಂಬಂಧಿಸಿದ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಧಾರವಾಡದ ಮನೆ ಮತ್ತು ಬಾಡ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಪೊಲೀಸ್ ಸಿಬ್ಬಂದಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ನಗರ್ತಪೇಟೆಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆಯಲ್ಲಿ ಏರಿಕೆ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments