Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು: 25 ಕಡೆಗಳಲ್ಲಿ ದಿಢೀರ್ ದಾಳಿ

Karnataka Lokayukta Police

Sampriya

ಬೆಂಗಳೂರು , ಗುರುವಾರ, 21 ನವೆಂಬರ್ 2024 (14:38 IST)
Photo Courtesy X
ಬೆಂಗಳೂರು:  ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸುಮಾರು 25 ಕಡೆಗಳಲ್ಲಿ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಮುಖ ನಾಲ್ವರು ಅಧಿಕಾರಿಗಳ ಕಚೇರಿ ಹಾಗೂ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ.

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎಸ್​ಪಿ ಮಹೇಶ್ ಮನೆ ಮೇಲೆ‌ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಅವರ ಮಂಗಳೂರಿನ ವೆಲೆನ್ಸಿಯಾದ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೃಷ್ಣವೇಣಿ 2 ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದಾರೆ.

ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆಗಳ ಮೇಲೆ  ಮಂಡ್ಯದಲ್ಲಿ ‌ಲೋಕಾಯುಕ್ತ ಎಸ್​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉದ್ಯಮಿ ಗೌತಮ್‌ ಅದಾನಿಯನ್ನು ತಕ್ಷಣ ಬಂಧಿಸಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗ್ರಹ