Webdunia - Bharat's app for daily news and videos

Install App

ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ ! ದಾಳಿಯಲ್ಲಿ ಸಿಕ್ಕಿದ್ದಾದ್ರು ಏನು?

Webdunia
ಬುಧವಾರ, 28 ಜೂನ್ 2023 (12:25 IST)
ಬಾಗಲಕೋಟೆ : ಇಲ್ಲಿನ ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದ್ದು, ಎರಡು ಸಾಕು ಆಮೆಗಳು ಪತ್ತೆಯಾಗಿವೆ.

ಬಾಗಲಕೋಟೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಹಾಗೂ ಸಹಾಯಕ ನಿರ್ದೇಶಕ ಕೃಷ್ಣಾ ಶಿರೂರು ಅವರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ವಿದ್ಯಾಗಿರಿಯ ಅಕ್ಕಿಮರಡಿ ಬಡಾವಣೆಯಲ್ಲಿರುವ ಚೇತನಾ ಪಾಟೀಲ್ ಹಾಗೂ ವಿದ್ಯಾಗಿರಿಯ 18ನೇ ಕ್ರಾಸ್ನಲ್ಲಿರುವ ಕೃಷ್ಣಾ ಶಿರೂರು ಅವರ ಮನೆಗಳ ಮೇಲೆ ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ನೇತೃತ್ವದ ತಂಡ ದಾಳಿ ನಡೆಸಿದೆ. 

ಈ ವೇಳೆ ಚೇತನಾ ಪಾಟೀಲ್ ಅವರ ಮನೆಯಲ್ಲಿ 2 ಸಾಕು ಆಮೆಗಳು ಪತ್ತೆಯಾಗಿವೆ. ಆಮೆಗಳನ್ನ ಮನೆಯಲ್ಲಿ ಸಾಕಿದ್ದೇಕೆ ಎಂಬ ಕುತೂಹಲ ವ್ಯಕ್ತಪಡಿಸಿರುವ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳನ್ನೂ ಕರೆಸಿ ಪರಿಶೀಲಿಸಲಾಗುತ್ತಿದೆ. ಇದೇ ವೇಳೆ ಆಸ್ತಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಪತ್ತೆಯಾಗಿವೆ. ಬಾಗಲಕೋಟೆ ವಿದ್ಯಾಗಿರಿಯ ಅಕ್ಕಿಮರಡಿ ಬಡಾವಣೆಯಲ್ಲಿರುವ ಮನೆಯಲ್ಲಿ ಶೋಧ ಮುಂದುವರಿದಿದ್ದು, ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನ ಕೆಆರ್ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಿತು. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments