Publish Date: Fri, 02 Dec 2022 (16:49 IST)
Updated Date: Fri, 02 Dec 2022 (17:18 IST)
ಎಪಿಎಂಸಿ ಆಂತರಿಕ ಲೆಕ್ಕ ಪರಿಶೋಧಕ ಲೋಕಾಯುಕ್ತ ಬಲೆಗೆ ಸಿಕ್ಕಿಹಾಕಿಕೊಂಡಿದ್ದಾರೆ. ವಿಜಯಪುರದ ಎಪಿಎಂಸಿ ಆಂತರಿಕ ಲೆಕ್ಕಪರಿಶೋಧಕ ಶಂಕರಯ್ಯ ಹಿರೇಮಠ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಈತ, ಎಪಿಎಂಸಿಯಲ್ಲಿ ವ್ಯಾಪಾರ ಮಾಡಲು ಸಂಬಂಧಿಸಿದಂತೆ ಟ್ರೇಡಿಂಗ್ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹೆಚ್ಚುವರಿಯಾಗಿ ಸಿಕ್ಕ 39 ಸಾವಿರ ಹಣವನ್ನ ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ SP ಅನಿತಾ ಹದ್ದನ್ನವರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
geetha
Publish Date: Fri, 02 Dec 2022 (16:49 IST)
Updated Date: Fri, 02 Dec 2022 (17:18 IST)