ನಗರದ ಬೆಳಂದೂರಿನ ಅಮಾನಿ ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿಗ ಅವರು ಇಂದು ನಗರದ ಉನ್ನತಾಧಿಕಾರಿಗಳ ಸಭೆ ಕರೆದಿದ್ದು, ಅಧಿಕಾರಿಗಳ ಬೇಜವಾಬ್ದಾರಿತನದ ಉತ್ತರಕ್ಕೆ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಇಲ್ಲಿನ ಅಮಾನಿ ಕೆರೆಯ ನೀರಿನ ಮೇಲೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಇಂದು ಸಭೆ ಕರೆದಿದ್ದರು. ಈ ವೇಳೆ ಅಧಿಕಾರಿಗಳಿಗೆ ನೀರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂದು ಪ್ರಶ್ನಿಸಿದರು. ಈ ವೇಳೆ ಅಧಿಕಾರಿಗಳ ನಿರ್ಲಕ್ಷ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಬಿಬಿಎಂಪಿ, ಬಿಡಿಎ, ಕೆಎಸ್‌ಪಿಸಿಬಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ವಿ.ಶಂಕರ್ ಸೇರಿದಂತೆ ಸಾಕಷ್ಟು ಮಂದಿ ಭಾಗವಹಿಸಿದ್ದರು. ಸಭೆಯು 2.5 ಗಂಟೆಗಳ ಕಾಲ ನಡೆಸಿದ್ದಾರೆ.
ನಗರದ ವರ್ತೂರು ಹಾಗೂ ಅಮಾನಿ ಕೆರೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದು, ಸುತ್ತಲಿನ ವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.