Webdunia - Bharat's app for daily news and videos

Install App

ಬಿಎಸ್‌ವೈ ವಿರುದ್ದ ಸಿರಾಜುದ್ದೀನ್ ಬಾಷಾ ದೂರುಗಳು ರದ್ದು: ಲೋಕಾಯುಕ್ತ ಕೋರ್ಟ್ ಆದೇಶ

Webdunia
ಸೋಮವಾರ, 30 ನವೆಂಬರ್ 2015 (17:40 IST)
ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ವಿರುದ್ಧ  ಸಿರಾಜುದ್ದೀನ್ ಬಾಷಾ ಸಲ್ಲಿಸಿದ್ದ ನಾಲ್ಕು ದೂರುಗಳನ್ನು ರದ್ದು ಮಾಡಿ ಬೆಂಗಳೂರಿನ ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶ ನೀಡಿದೆ. 
 
ಗವರ್ನರ್  ಪ್ರಾಸಿಕ್ಯೂಷನ್‌ಗೆ ನೀಡಿದ್ದ  ಅನುಮತಿಯನ್ನು ಹೈಕೋರ್ಟ್ ರದ್ದು ಮಾಡಿರುವುದರಿಂದ ಬಿಎಸ್‌ವೈ ವಿರುದ್ಧ ಸಿರಾಜಿನ್ ಬಾಷಾ ಸಲ್ಲಿಸಿದ್ದ ದೂರುಗಳನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ವಕೀಲರು ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದೆ.  ಬಿಎಸ್‌ವೈ ಪಾಸ್‌ಪೋರ್ಟ್ ವಾಪಸ್ ಮಾಡುವಂತೆಯೂ ಸೂಚಿಸಲಾಗಿದೆ. 
ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಬಿಎಸ್‌ವೈ ವಿರುದ್ಧ ಹಲವು ಡಿನೋಟಿಫಿಕೇಶನ್ ಕೇಸ್‌ಗಳು ಇದ್ದವು. ಸಿರಾಜಿನ್ ಬಾಷಾ ಯಡಿಯೂರಪ್ಪನವರ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಖಾಸಗಿ ದೂರುಗಳನ್ನು ಸಲ್ಲಿಸಿದ್ದರು. ಈ ಕುರಿತು ತನಿಖೆ ಮಾಡುವಂತೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು.  ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಕುರಿತು ನೀಡಿದ್ದ ಅನುಮತಿ ರದ್ದುಮಾಡಿತ್ತು.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments