Publish Date: Mon, 17 Jul 2017 (15:51 IST)
Updated Date: Mon, 17 Jul 2017 (15:53 IST)
ಮುಳುಬಾಗಿಲು: 7ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಅರೋಪಿಯೊಬ್ಬ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ವರದಿಯಾಗಿದೆ.
ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನಲ್ಲಿ ವಿಜಯಕುಮಾರ್ ಎನ್ನುವ ಆರೋಪಿ ಮನೆಯಲ್ಲಿ ಯಾರು ಇಲ್ಲದೇ ವೇಳೆ ಮನೆಗೆ ನುಗ್ಗಿ ಏಕಾಂಗಿಯಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.
ಬಾಲಕಿಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಬಾಲಕಿಯ ಪೋಷಕರು ಆರೋಪಿ ವಿಜಯ್ ಕುಮಾರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.