Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿ ಹಣೆ ಬರೆಹ ಬರೆಯೋದು ಭಗವಂತ: ಡಿಕೆಶಿಗೆ ನಿಖಿಲ್ ಕೌಂಟರ್

JDS Youth President Nikhil Kumaraswamy

Sampriya

ಬೆಂಗಳೂರು , ಸೋಮವಾರ, 29 ಜುಲೈ 2024 (13:00 IST)
Photo Courtesy X
ಬೆಂಗಳೂರು: ಕುಮಾರಸ್ವಾಮಿ ಹಣೆಬರಹ ಬರೆಯೋದು ಭಗವಂತ ಮತ್ತು ಏಳೂವರೆ ಕೋಟಿ ಜನತೆ. ಕಾದು ನೋಡೊಣ ಭಗವಂತ ಯಾರ್ ಯಾರ್ ಹಣೆಬರಹ ಹೇಗೆ ಬರೆಯುತ್ತಾನೆಂದು ಡಿಕೆ ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ಕೌಂಟರ್ ಕೊಟ್ಟಿದ್ದಾರೆ.

ಮುಂದಿನ ದಿನಗಳಲ್ಲಿ ರಾಮನಗರ ಹೆಸರು ಬದಲು ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿ ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಕುಮಾಸ್ವಾಮಿ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ರಾಮನಗರ ಜಿಲ್ಲೆ ಹೆಸರನ್ನ ಮರು ಸ್ಥಾಪನೆ ಮಾಡೇ ಮಾಡುತ್ತೇವೆ ಎಂದು ಕೌಂಟರ್ ಕೊಟ್ಟರು.

ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಹೆಸರು ಬದಲಾವಣೆ ಮಾಡಿದರೆ ಅನೇಕ ಸಮಸ್ಯಗೆಳು ಎದುರಾಗುತ್ತದೆ.  ರೆವಿನ್ಯೂ ರೆಕಾರ್ಡ್, ಸರ್ಕಾರದ ದಾಖಲೆಗಳು 5 ತಾಲೂಕುಗಳಲ್ಲಿ ಬದಲಾವಣೆ ಆಗಬೇಕು. ಹೆಸರು ಬದಲಾವಣೆ ಮಾಡಿದ್ದಲ್ಲಿ ಜನರು ದಿನನಿತ್ಯ ಕಚೇರಿಗೆ ಓಡಾಡಬೇಕು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಕೋಚಿಂಗ್ ಸೆಂಟರ್ ದುರಂತ, ಮತ್ತೇ ಐವರನ್ನು ಬಂಧಿಸಿದ ಪೊಲೀಸರು