Publish Date: Thu, 02 May 2019 (18:36 IST)
Updated Date: Thu, 02 May 2019 (18:38 IST)
ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಪ್ರಚಾರ ತೀವ್ರಗೊಳಿಸಿದೆ.
ಕಲಬುರ್ಗಿಯ ಚಿಂಚೋಳಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆಯಿತು. ಐನೋಳಿ, ಚಿಮ್ಮನಚೂಡ, ಕೋಂಚಾವರಂ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆ ನಡೆಯಿತು.
ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರ ಪ್ರಚಾರ ಮಾಡಲಾಯಿತು.
ಬೂತ್ ಮಟ್ಟದ ಪ್ರಮುಖರ ಸಭೆ ಮಾಡುತ್ತಿರುವ ಬಿಜೆಪಿ ನಾಯಕರು, ಪಕ್ಷದ ಅಭ್ಯರ್ಥಿ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದಾರೆ.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ, ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್, ಮಾಜಿ ಸಚಿವ ಸುನೀಲ್ ವಲ್ಯಾಪೂರೆ, ಬಿಜೆಪಿ ಶಾಸಕರು, ಮುಖಂಡರು ಭಾಗಿಯಾಗಿದ್ರು.