Select Your Language

Notifications

webdunia
webdunia
webdunia
webdunia

ಧ್ವನಿವರ್ಧಕ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಧ್ವನಿವರ್ಧಕ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಆರಗ ಜ್ಞಾನೇಂದ್ರ
bengaluru , ಬುಧವಾರ, 11 ಮೇ 2022 (13:58 IST)
ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದ್ದು, ಶಬ್ಧ ಮಾಲಿನ್ಯ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅನುಮತಿ ಇಲ್ಲದೆ ಧ್ವನಿವರ್ಧಕ ಗಳನ್ನು ಉಪಯೋಗಿಸುತ್ತಿರುವವರು 15 ದಿನದೊಳಗಾಗಿ ಅನುಮತಿ ಪಡೆದುಕೊಳ್ಳಬೇಕು. ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು, ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ ಎಂದು ಅವರು ಹೇಳಿದರು.
ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು. ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು, ತೆಗೆದು ಹಾಕುವ ಪ್ರಕ್ರಿಯೆ, ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ತಿಂಗಳಲ್ಲೇ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಕೊಂದಳು!