ಧ್ವನಿವರ್ಧಕ ಮಾರ್ಗಸೂಚಿ ಪಾಲಿಸದಿದ್ದರೆ ಕಾನೂನು ಕ್ರಮ: ಆರಗ ಜ್ಞಾನೇಂದ್ರ

Webdunia
ಬುಧವಾರ, 11 ಮೇ 2022 (13:58 IST)
ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟಿನ ಆದೇಶದಂತೆ, ರಾಜ್ಯದಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಗಿದ್ದು, ಶಬ್ಧ ಮಾಲಿನ್ಯ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕಗಳ ಉಪಯೋಗಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅನುಮತಿ ಇಲ್ಲದೆ ಧ್ವನಿವರ್ಧಕ ಗಳನ್ನು ಉಪಯೋಗಿಸುತ್ತಿರುವವರು 15 ದಿನದೊಳಗಾಗಿ ಅನುಮತಿ ಪಡೆದುಕೊಳ್ಳಬೇಕು. ತಪ್ಪಿದ್ದಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳು, ದ್ವನಿವರ್ಧಕ ಗಳನ್ನು ತೆಗೆಸಿ ಹಾಕುತ್ತಾರೆ. ಇದರಿಂದ ಯಾರಿಗೂ ವಿನಾಯಿತಿ ಇಲ್ಲ ಎಂದು ಅವರು ಹೇಳಿದರು.
ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸಲಾಗುವುದು. ಶಬ್ದ ಮಾಲಿನ್ಯ ಉಂಟುಮಾಡುವ ಹಾಗೂ ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು, ತೆಗೆದು ಹಾಕುವ ಪ್ರಕ್ರಿಯೆ, ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಮದಾಸೆ ತೀರಿಸು ಎಂದು ಕಾಟ ಕೊಡ್ತಿದ್ದ ಮಾವ.. ಸೊಸೆ ಮಾಡಿದ ಕೆಲಸವೇನು ಗೊತ್ತಾ Video

ಬೇಕಿತ್ತಾ ಇಂಥಾ ಹುಚ್ಚುತನ.. ಬೆಟ್ಟದ ತುದಿಯಲ್ಲಿ ಸಮರ್ ಸಾಲ್ಟ್, ಯುವಕನ ಗತಿ ಏನಾಯ್ತು ನೋಡಿ Video

ರೈಲಿನಲ್ಲಿ ಚುಡಾಯಿಸಿದ್ದಕ್ಕೆ ಯುವಕನಿಗೆ ಯುವತಿ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ಶಾಕ್ ಆಗ್ತೀರಿ video

ತಿರುವನಂತಪುರಂ ಹೋಟೆಲ್ ಲಿಫ್ಟ್ನಲ್ಲಿ ಸಿಲುಕಿದ ಶಶಿ ತರೂರ್: ರಕ್ಷಿಸಿದ ಅಗ್ನಿಶಾಮಕ ದಳದವರಿಗೆ ಕೊನೆಗೆ ಏನು ಮಾಡಿದ್ರು ಗೊತ್ತಾ Video

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments