Publish Date: Sun, 15 May 2022 (16:35 IST)
Updated Date: Sun, 15 May 2022 (16:37 IST)
ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಮಸ್ಕಲ‍್ ಗ್ರಾಮದಲ್ಲಿ ನಡೆದಿದೆ.
ಧನುಷ್ ಮತ್ತು ಸುಷ್ಮಾ ಕಳೆದೆರಡು ವರ್ಷಗಳಿಂದ ಪ್ರೀತಿಸಿದ್ದು, ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು. ಆದರೆ ಮೇ 11 ರಂದು ಧನುಷ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಸುಷ್ಮಾ ಮೇ 14 ರಂದು ರಾತ್ರಿ ಸುಷ್ಮಾ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ.
ತುಮಕೂರಿನ ಮಸ್ಕಲ್ ಗ್ರಾಮದ ಧನುಷ್ ಮೇ 11 ರಂದು ನೆಲಮಂಗಳ ಕುಲಾನಹಳ್ಳಿ ಬಳಿ ಊರಿನ ಜಾತ್ರೆಗೆ ಬರುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅರೆಹಳ್ಳಿ ಗ್ರಾಮದ ಸುಷ್ಮಾ ಈ ಸುದ್ದಿ ಕೇಳಿ ಆಘಾತಗೊಂಡಿದ್ದು, ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಳು.
ಧನುಷ್ ಸಾವಿನ ಯೋಚನೆಯಲ್ಲಿಯೇ ದುಃಖಿಸುತ್ತಿದ್ದ ಸುಷ್ಮಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ತಕ್ಷಣ ಕುಟುಂಬಸ್ಥರು ಸುಷ್ಮಾಳನ್ನು ನಾಲ್ಕೈದು ಆಸ್ಪತ್ರೆಗಳಿಗೆ ಕರೆದುಕೊಂಡು ಓಡಾಡಿದರೂ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ 8 ಗಂಟೆ ಸುಮಾರಿನಲ್ಲಿ ಮೃತಪಟ್ಟಿದ್ದಾಳೆ.