ಮದುವೆಗೆ ಕುಜ ದೋಷ ಅಡ್ಡಿ ಅಂತ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ: ಮಹಿಳಾ ಪೊಲೀಸ್ ಸಾವು!

Webdunia
ಶುಕ್ರವಾರ, 17 ಜೂನ್ 2022 (19:00 IST)
ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದು,  ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟರೆ, ಪ್ರಿಯಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿ ಹಾಗೂ  ಪೊಲೀಸ್ ಕಾನ್ಸ್ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆತ್ಮಹತ್ಯೆಗೆ ಯತ್ನಿಸಿದ್ದು, ಸುಧಾ ಚಿಕಿತ್ಸೆ ಫಲಕಾರಿಯದೇ ಮೃತಪಟ್ಟಿದ್ದಾರೆ.
ಇಬ್ಬರು 6 ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ಧರಾಗಿದ್ದರು. ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು. 
ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಈಕೆಯೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾರೆ ಎನ್ನಲಾಗಿದೆ. ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ಪಟ್ಟು ಹಿಡಿದಿದ್ದಾರೆ.
ಯುವತಿ ಸುಧಾಳಿಗೂ ಫೋನ್ ಮಾಡಿ ನನ್ನ ಮಗನ ಸಹವಾಸ ಬಿಟ್ಟು ಬಿಡು. ಈ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಹಾಕಿದ್ದಾರೆ. ಇದರಿಂದ ನೊಂದ ಪ್ರೇಮಿಗಳು ಮೇ 31ರಂದು ಭದ್ರಾವತಿಯ ಎಪಿಎಂಸಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. 
ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ