ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಇಳಿಕೆ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (21:15 IST)
ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 91.5 ರೂಪಾಯಿ ಇಳಿದಿದೆ. ಈ ಹಿಂದೆ 1,976 ರೂ. ಇದ್ದ ಸಿಲಿಂಡರ್‌ ಬೆಲೆ ಈಗ 1,885 ಕ್ಕೆ ಲಭ್ಯವಿದೆ. ಇಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಯ ಪ್ರಕಾರ, ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಮೇ ತಿಂಗಳಲ್ಲಿ 19 ಕೆಜಿ ಸಿಲಿಂಡರ್‌ನ ಬೆಲೆ ಸಾರ್ವಕಾಲಿಕ ಗರಿಷ್ಠ 2,354 ರೂ.ಗೆ ತಲುಪಿತ್ತು. ಆದರೆ ಈಗ ದೆಹಲಿಯಲ್ಲಿ 1,885 ರೂ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈ ಪ್ರಮುಖ ನಗರಗಳಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಕುಸಿದಿದೆ. ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,095 ರೂ.ನಿಂದ 1,995 ರೂ.ಗೆ ಇಳಿಕೆಯಾಗಿದೆ. ಅದೇ ರೀತಿ ಮುಂಬೈನಲ್ಲಿ 1,936 ರೂ. ಬದಲಿಗೆ 1,844 ರೂಪಾಯಿ ಮತ್ತು ಚೆನ್ನೈನಲ್ಲಿ 2,141 ರೂ. ಬದಲಿಗೆ 2,045 ರೂ., ದೆಹಲಿಯಲ್ಲಿ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1053 ರೂ. ಇದೆ. ಆದರೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಬದಲಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments