Select Your Language

Notifications

webdunia
webdunia
webdunia
webdunia

ಲುಲು ಗ್ರೂಪ್ ಜೊತೆ 2000 ಕೋಟಿ ರೂ. ಹೂಡಿಕೆ ರಾಜ್ಯ ಸರಕಾರ ಒಪ್ಪಂದ!

ಲುಲು ಗ್ರೂಪ್ ಜೊತೆ 2000 ಕೋಟಿ ರೂ. ಹೂಡಿಕೆ ರಾಜ್ಯ ಸರಕಾರ ಒಪ್ಪಂದ!
bengaluru , ಸೋಮವಾರ, 23 ಮೇ 2022 (17:40 IST)
ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್   ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.
ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಬಂಡವಾಳ ಹೂಡಿಕೆ ಕುರಿತು ಚರ್ಚಿಸಿದರು.
ಈ ವೇಳೆ ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು  ಅನ್ವೇಷಿಸುವಂತೆ ತಿಳಿಸಿದ ಮುಖ್ಯ ಮಂತ್ರಿಗಳು, ಧಾರವಾಡದಲ್ಲಿ ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಗೆ ವಿಶೇಷ  ಪ್ರೋತ್ಸಾಹಕ ಪ್ಯಾಕೇಜ್ ನ್ನು ಸಹ ಪರಿಗಣಿಸಬಹುದಾಗಿದೆ ಎಂದರು.
ಜ್ಯೂಬಿಲಿಯಂಟ್ ಫುಡ್ ವರ್ಕ್ಸ್  ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್  ಸ್ಥಾಪಿಸಲು ತೀರ್ಮಾನಿಸಿದೆ. ಪ್ರಸ್ತುತ ರಾಜ್ಯದಲ್ಲಿ  9000 ಜನರು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

8 ವರ್ಷದಲ್ಲಿ ಜನರ ಜೀವನ ಬದಲಾಗಿದೆ: ಪ್ರಧಾನಿ ಮೋದಿ