Publish Date: Fri, 08 Dec 2023 (17:00 IST)
Updated Date: Fri, 08 Dec 2023 (17:49 IST)
ಸುಗ್ಗಿ ಸಂಕ್ರಾಂತಿ ವೇಳೆಗೆ ರಾಜಧಾನಿ ಬೆಂಗಳೂರಿನ ಇಂದಿರಾ ಕ್ಯಾಂಟೀನ್ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ ಭಾಗ್ಯ ಸಿಗಲಿದೆ.
ಆರಂಭದಿಂದಲೂ ಇಂದಿರಾ ಕ್ಯಾಂಟೀನ್ಗಳಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ, ಚಪ್ಪಾತಿ ನೀಡುವುದಕ್ಕೆ ಬೇಡಿಕೆ ಕೇಳಿ ಬರುತ್ತಿತ್ತು. ಇದೀಗ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಮಾಡುವವರಿಗೆ ಮುದ್ದೆ ಭಾಗ್ಯ ನೀಡುವುದಕ್ಕೆ ಬಿಬಿಎಂಪಿ ಸಿದ್ಧತೆ ಮಾಡಲಾಗುತ್ತಿದೆ ಅಂತಾ ಹೇಳಲಾಗಿದೆ.