Webdunia - Bharat's app for daily news and videos

Install App

ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಡಲು ಸಿದ್ದರಾಮಯ್ಯರಿಂದ ಸುಳ್ಳಿನ ಕಂತೆ: ವಿಜಯೇಂದ್ರ ವಾಗ್ದಾಳಿ

Sampriya
ಗುರುವಾರ, 14 ನವೆಂಬರ್ 2024 (14:04 IST)
ಬೆಂಗಳೂರು: ಸಿದ್ದರಾಮಯ್ಯನವರೇ ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್‌ ಶಾಸಕರಿಗೆ ತಲಾ ₹50 ಕೋಟಿ ಆಮಿಷವೊಡ್ಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರ ಆರೋಪ ಮಾಡಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್‌ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ ಎಂದಿದ್ದಾರೆ

ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣಿ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟೂ ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ. ಈ ಹಿನ್ನಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ ಎಂದಿದ್ದಾರೆ.‌‌

ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ₹50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಮುಂದಿನ ಸುದ್ದಿ
Show comments