Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯಗೆ ಎಂ.ಸಿ.ನಾಣಯ್ಯ ಟಾಂಗ್

ಸಿಎಂ ಸಿದ್ದರಾಮಯ್ಯಗೆ ಎಂ.ಸಿ.ನಾಣಯ್ಯ ಟಾಂಗ್
ಬೆಂಗಳೂರು , ಸೋಮವಾರ, 29 ಆಗಸ್ಟ್ 2016 (13:39 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಎಲ್ಲಾ ಭಾಗ್ಯಗಳು ರಾಮಕೃಷ್ಣ ಹೆಗಡೆಯವರ ಕೊಡುಗೆಗಳು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಸಿ. ನಾಣಯ್ಯ ಟಾಂಗ್ ನೀಡಿದ್ದಾರೆ.
ಪ್ರಸ್ತುತ ಸರಕಾರದಿಂದ ಯಾವುದೇ ಹೊಸ ಯೋಜನೆಗಳು ಘೋಷಣೆಯಾಗಿಲ್ಲ. ಹಳೆಯ ಯೋಜನೆಗಳಿಗೆ ಹೊಸ ಬಣ್ಣ ನೀಡಿ ತಾವೇ ಜಾರಿಗೊಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸರಕಾರ ಬೀಗುತ್ತಿದೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಸರಕಾರ ಯಾವತ್ತೂ ಬಡವರ, ಹಿಂದುಳಿದವರ ಪರವಾಗಿದೆ ಎಂದು ಹೇಳಿಕೆ ನೀಡುತ್ತದೆ. ಆದರೆ, ಸರಕಾರದಿಂದ ಹಿಂದುಳಿದ ವರ್ಗಗಳಿಗೆ ಯಾವುದೇ ರೀತಿಯ ಲಾಭವಾಗಿಲ್ಲ ಸರಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ಭೂ ಒತ್ತುವರಿ ತೆರವಿನಲ್ಲಿ ಬಡವರ ಮನೆಗಳನ್ನು ನೆಲಸಮಗೊಳಿಸಲಾಗುತ್ತಿದೆ. ಆದರೆ, ಶ್ರೀಮಂತರ ಮತ್ತು ಪ್ರಭಾವಿಗಳ ಮನೆಗಳನ್ನು ನೆಲಸಮಗೊಳಿಸಲು ಬಿಬಿಎಂಪಿ ಹಿಂದೇಟು ಹಾಕುತ್ತಿದೆ. ಸಿಎಂ ಸಿದ್ದರಾಮಯ್ಯ ಸರಕಾರ ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ನ್ಯಾಯ ಎನ್ನುವಂತೆ ವರ್ತಿಸುತ್ತಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಎಂ.ಸಿ.ನಾಣಯ್ಯ ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ ಗ್ರಾಹಕರಿಗೆ ಬಂಪರ್ ಆಫರ್: ಕೇವಲ 250 ರೂ.ಗಳಿಗೆ 10 ಜಿಬಿ, 4ಜಿ ಡೇಟಾ ಸೇವೆ