Select Your Language

Notifications

webdunia
webdunia
webdunia
webdunia

ಡಿವೈಎಸ್‌ಪಿ ಎಂ.ಕೆ.ಗಣಪತಿ ಪ್ರಕರಣ ಸಿಬಿಐಗೆ ವಹಿಸಲು ಗೃಹ ಸಚಿವರಿಗೆ ಬಿಎಸ್‌ವೈ ಮನವಿ

ಡಿವೈಎಸ್‌ಪಿ
ನವದೆಹಲಿ , ಶುಕ್ರವಾರ, 8 ಜುಲೈ 2016 (19:19 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಅರವಿಂದ್ ಲಿಂಬಾವಳಿ ಮತ್ತು ಬಿಜೆಪಿ ಕಾರ್ಯದರ್ಶಿ ರವಿ ಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಖಾತೆ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
 
ಹಿರಿಯ ಅಧಿಕಾರಿಗಳ ಕಿರುಕುಳದಿಂದ ಕರ್ನಾಟಕದಲ್ಲಿ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ಕೂಡಲೇ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಬೇಕು. ಮತ್ತು ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಹೆಸರು ಕೇಳಿಬಂದಿದೆ. ಮಾಜಿ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿ ಇಂದು ರಾಜ್ಯಾಧ್ಯಂತ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್