ಮಂಡ್ಯ: ಮದ್ದೂರಿನಲ್ಲಿ ಹಿಂದೂಗಳ ಮೇಲೆ ನಡೆದ ಲಾಠಿ ಚಾರ್ಜ್ ಬಗ್ಗೆ ಈಗ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದು ವೈರಲ್ ಆಗ್ತಿದೆ.
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮುಸ್ಲಿಂ ಸಮುದಾಯಕ್ಕೆ ಸೇರಿದ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಇದರ ವಿರುದ್ಧ ಹಿಂದೂಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಇದರಲ್ಲಿ ಓರ್ವ ಹೆಣ್ಣು ಮಗಳನ್ನು ಅಟ್ಟಾಡಿಸಿ ಹೊಡೆಯುತ್ತಿರುವ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಗೃಹಲಕ್ಷ್ಮಿ ಹಣ ಕೂಡಿಟ್ಟ ಮಹಿಳೆಯರಿಗೆ ಏಟಿನ ಗ್ಯಾರಂಟಿ ಸಿಕ್ತು ಎಂದು ವ್ಯಂಗ್ಯ ಭರಿತ ಪೋಸ್ಟ್ ಒಂದು ವೈರಲ್ ಆಗಿದೆ.
ಗ್ಯಾರಂಟಿ ಹಣಕ್ಕೆ ಆಸೆ ಬಿದ್ದು ಮಹಿಳೆಯರು ಕಾಂಗ್ರೆಸ್ ಗೆ ವೋಟ್ ಹಾಕಿ ಅಧಿಕಾರಕ್ಕೆ ತಂದರು. ಈಗ ನೋಡಿದ್ರೆ ಅವರು ಮಹಿಳೆಯರಿಗೆ ಲಾಠಿಯ ಗ್ಯಾರಂಟಿ ಕೊಡ್ತಿದ್ದಾರೆ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಟೀಕಿಸಿದ್ದಾರೆ.