Select Your Language

Notifications

webdunia
webdunia
webdunia
webdunia

ಮತ್ತೆ ಕೋಟ್ಯಾದೀಪತಿಯಾದ ಮಾದೇಶ್ವರ!

webdunia
ಚಾಮರಾಜನಗರ , ಗುರುವಾರ, 25 ಆಗಸ್ಟ್ 2022 (09:02 IST)
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2 ಕೋಟಿ 16 ಸಾವಿರ ರೂ. ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.

ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.

ಈ ಬಾರಿ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನ ಭಕ್ತರು ಆಗಮಿಸಿದ್ದರು. ಕಳೆದ 40 ದಿನಗಳ ಅವಧಿಯಲ್ಲಿ 2 ಕೋಟಿ 16 ಸಾವಿರದ 340 ರೂ ನಗದು, 50 ಗ್ರಾಂ ಚಿನ್ನ ಹಾಗೂ 2.342 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದು ಬಂದ ಹೆತ್ತಮ್ಮನನ್ನೇ ಹೊಡೆದು ಕೊಂದ