Publish Date: Thu, 11 Mar 2021 (12:21 IST)
Updated Date: Thu, 11 Mar 2021 (12:22 IST)
ಬೆಂಗಳೂರು : ಜೆಡಿಎಸ್ ನ ಮಾಜಿ ಶಾಸಕ ಮಧು ಬಂಗಾರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರನ್ನು ಇಂದು ಭೇಟಿಯಾಗಿದ್ದಾರೆ.
ಇಂದು ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ .
ಕಳೆದ ತಿಂಗಳು ಮಧು ಬಂಗಾರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.