Select Your Language

Notifications

webdunia
webdunia
webdunia
webdunia

ಶಿವಮೊಗ್ಗದಲ್ಲಿ ಮತ್ತೆ ಶುರುವಾಯ್ತು ಬಂಗಾರಪ್ಪ ಪುತ್ರರ ಕಾದಾಟ

ಮಧು ಬಂಗಾರಪ್ಪ
ಶಿವಮೊಗ್ಗ: ಮಾಜಿ ಸಿಎಂ, ದಿವಂಗತ ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ಮತ್ತೆ ಶಿವಮೊಗ್ಗದಲ್ಲಿ ರಾಜಕೀಯ ಗುದ್ದಾಟ ಶುರುವಾಗಿದೆ.


ಬಿಜೆಪಿ ಶಾಸಕರಾಗಿರುವ ಕುಮಾರ್ ಬಂಗಾರಪ್ಪ ಸೊರಬ ಪಟ್ಟಣದ ಕಾನಕೇರಿ ಬಡಾವಣೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಆಕಾಶ್ ನಾಯ್ಕ್  ಎಂಬವರ ಮನೆ ಕೆಡವಲು ಆದೇಶ ನೀಡಿದ್ದಾರೆ ಎಂದು ಆರೋಪಿಸಿ ಸಹೋದರ ಮಧು ಬಂಗಾರಪ್ಪ ಪ್ರತಿಭಟನೆ ನಡೆಸಿದ್ದಾರೆ.

ಆದರೆ ಇದು ಅಕ್ರಮ ಕಟ್ಟಡವಾಗಿದ್ದರಿಂದ ತೆರವುಗೊಳಿಸಿದ್ದೇವೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಆದರೆ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಧ್ವೇಷದ ರಾಜಕಾರಣ ಮಾಡುತ್ತಿದ್ದು, ಬೇಕೆಂದೇ ಮನೆ ಕೆಡವಿದ್ದಾರೆ ಎಂದು ಆರೋಪಿಸಿದ್ದಾರೆ. ಇದೀಗ ಸಹೋದರರ ನಡುವೆ ಮತ್ತೆ ಗುದ್ದಾಟಕ್ಕೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ದ್ವಿತೀಯ ಪಿಯುಸಿ ಫಲಿತಾಂಶ