Daily Horoscope

Select Your Language

Notifications

webdunia
webdunia
webdunia
webdunia

1ನೇ ತರಗತಿ ದಾಖಲಾತಿ ವಯೋಮಿತಿ ಸಡಿಲಿಕೆ ಬಗ್ಗೆ ಮಧುಬಂಗಾರಪ್ಪ ಪ್ರತಿಕ್ರಿಯೆ

Minister MadhuBangarappa
ಬೆಂಗಳೂರು: ಕರ್ನಾಟಕದಲ್ಲಿ 1ನೇ ತರಗತಿ ಪ್ರವೇಶಕ್ಕೆ 2026–27ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಕನಿಷ್ಠ 6 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಘೋಷಣೆ ಮಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, 1ನೇ ತರಗತಿ ಪ್ರವೇಶಕ್ಕೆ ಈಗಿರುವ 6 ವರ್ಷದ ವಯೋಮಿತಿಯನ್ನು ಎರಡು ತಿಂಗಳು ಸಡಿಲಿಸಿ, 5 ವರ್ಷ ಮತ್ತು 10 ತಿಂಗಳ ಮಕ್ಕಳಿಗೆ ಅರ್ಹತೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಮುಂದಿನ ದಿನಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಪ್ರವೇಶಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೊಸ ಕಾನೂನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಇಲಾಖೆ ಕಾನೂನನ್ನು ತರುತ್ತದೆ ಎಂದು ಹೇಳಿದರು. 

ಕರ್ನಾಟಕ ಶಿಕ್ಷಣ ಕಾಯಿದೆ, 1993 ರ ಅಧ್ಯಾಯ 3, ಸೆಕ್ಷನ್ 20 ರ ಅಡಿಯಲ್ಲಿ, 1 ನೇ ತರಗತಿ ಪ್ರವೇಶಕ್ಕೆ 60 ದಿನಗಳ ವಿನಾಯಿತಿಯನ್ನು ಒದಗಿಸಲಾಗುತ್ತಿದೆ. ಪ್ರವೇಶ ಸಾಫ್ಟ್‌ವೇರ್‌ನಲ್ಲಿಯೂ ಅಗತ್ಯ ಬದಲಾವಣೆಗಳನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ