Publish Date: Sat, 29 Dec 2018 (12:03 IST)
Updated Date: Sat, 29 Dec 2018 (12:10 IST)
ಬೆಂಗಳೂರು: ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ (47) ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಮಧುಕರ ಶೆಟ್ಟಿ ಅವರ ಅಂತ್ಯಕ್ರಿಯೆ ಭಾನುವಾರ ಉಡುಪಿಯಲ್ಲಿ ನಡೆಯಲಿದೆ. ಶನಿವಾರ ಮಧ್ಯಾಹ್ನ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬರಲಿದೆ.ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ಯಲಹಂಕದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 8.30ರ ಬಳಿಕ ಪಾರ್ಥಿವ ಶರೀರವನ್ನು ಮಂಗಳೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ನಂತರ ಉಡುಪಿಗೆ ತೆಗೆದುಕೊಂಡು ಹೋಗಲಾಗುತ್ತದೆ.
ಉಡುಪಿಯಲ್ಲಿ ಅಂತಿಮ ದರ್ಶನದ ಬಳಿಕ ಮಧುಕರ ಶೆಟ್ಟಿ ಅವರ ಹುಟ್ಟೂರಾದ ಕುಂದಾಪುರದ ಯಡಾಡಿಗೆ ಪಾರ್ಥಿವ ಶರೀರ ತಲುಪಲಿದೆ. ಭಾನುವಾರ ಬೆಳಗ್ಗೆ 10 ಗಂಟೆಗೆ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಲಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.