Publish Date: Mon, 03 Jul 2023 (21:40 IST)
Updated Date: Mon, 03 Jul 2023 (21:06 IST)
ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಮಾಜಿ ಸಚಿವ ಮಾಧುಸ್ವಾಮಿ ಮೌನ ಮುರಿದಿದ್ದಾರೆ.ಚಿಕ್ಕನಾಯಕನಹಳ್ಳಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ಶಾಸಕರಿದ್ದಾರೆ. ಪ್ರತಿಫಲ ಸಿಗದಿರುವುದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರವಲ್ಲ. ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ತಮ್ಮ ಸೋಲಿನ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
geetha
Publish Date: Mon, 03 Jul 2023 (21:40 IST)
Updated Date: Mon, 03 Jul 2023 (21:06 IST)