Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲೂ ಜಾರಿಯಾಗುತ್ತಾ ಮದರಸಾ ಶಿಕ್ಷಣ ಮಂಡಳಿ?

ಕರ್ನಾಟಕದಲ್ಲೂ ಜಾರಿಯಾಗುತ್ತಾ ಮದರಸಾ ಶಿಕ್ಷಣ ಮಂಡಳಿ?
ಬೆಂಗಳೂರು , ಬುಧವಾರ, 24 ಆಗಸ್ಟ್ 2022 (14:34 IST)
ಬೆಂಗಳೂರು : ಮದರಸಾಗಳ ಶಿಕ್ಷಣದ ಮೇಲೆ ಕಣ್ಣಿಡಲು ಉತ್ತರ ಪ್ರದೇಶ ಮಾದರಿಯಲ್ಲಿ ವಿಶೇಷ ಮಂಡಳಿ ರಚನೆಗೆ ರಾಜ್ಯ ಸರ್ಕಾರದ ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ.

ಮದರಸಾಗಳ ಶಿಕ್ಷಣದ ಬಗ್ಗೆ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿ ʼಕರ್ನಾಟಕ ಮದರಸಾ ವಿಶೇಷ ಶಿಕ್ಷಣ ಮಂಡಳಿʼ ರಚನೆಗೆ ಸರ್ಕಾರದ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಮದರಸಾಗಳ ಶಿಕ್ಷಣಕ್ಕೆ ಮಂಡಳಿ ಸ್ಥಾಪನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ 900 ಮದರಸಾಗಳು ವಕ್ಫ್ ಬೋರ್ಡ್ ಅಡಿ ನೋಂದಣಿಯಾಗಿದ್ದು ಪ್ರತಿ ವರ್ಷ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಮದರಸಾಗಳಲ್ಲಿ ಶಿಕ್ಷಣದ ಬದಲಾಗಿ ಧರ್ಮ ಬೋಧನೆಯ ಕೆಲಸ ಆಗುತ್ತಿದೆ ಎಂಬ ಆರೋಪ ಬಂದಿದೆ. 




Share this Story:

Follow Webdunia kannada

ಮುಂದಿನ ಸುದ್ದಿ

ಜಿಂಕೆಗಳು ಜೀವ ಉಳಿಸಿಕೊಂಡ ಪರಿ ಅದ್ಭುತ