Publish Date: Wed, 24 Aug 2016 (18:17 IST)
Updated Date: Wed, 24 Aug 2016 (18:19 IST)
ಮೃತ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಕುರಿತು ಗಾಂಡೂ ಪದ ಬಳಕೆ ಮಾಡಿರುವುದಕ್ಕೆ ಜೆಡಿಎಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಭಾಗದಲ್ಲಿ ಆ ಪದ ಬಳಕೆ ಮಾಡುವುದು ಸಾಮನ್ಯ. ಆದರೆ, ನಾನು ಮೃತ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುರಿತು ಆ ಪದ ಬಳಕೆ ಮಾಡಬಾರದಾಗಿತ್ತು ಎಂದು ಹೇಳಿದರು.
ಕಲ್ಲಪ್ಪ ಹಂಡಿಭಾಗ್ ಅವರ ತಂದೆ ಬಸಪ್ಪನವರ ಹೇಳಿಕೆಯಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ನಾನು ಯಾರ ಮನಸ್ಸಿಗೂ ನೋವುಂಟು ಮಾಡಬೇಕು ಎಂದು ಆ ರೀತಿ ಹೇಳಿಕೆ ನೀಡಿಲ್ಲ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಎಂದು ಸ್ಪಷ್ಟಪಡಿಸಿದರು.
ಮೊನ್ನೆ ನಡೆದ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಮೃತ ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುರಿತು ಗಾಂಡೂ ಪದ ಬಳೆಕೆ ಮಾಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .