Publish Date: Sat, 21 May 2022 (21:02 IST)
Updated Date: Sat, 21 May 2022 (21:04 IST)
ಮಧ್ಯರಾತ್ರಿ ಮಾರಕಾಸ್ತ್ರ ತೋರಿಸಿ ಬೆದರಿಸಿ ಹಣ, ಒಡವೆ ದರೋಡೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ಕಂಡುಬಂದಿದೆ. ಜಿಲ್ಲೆಯ ಹೊಸದುರ್ಗ ತಾಲೂಕಿನ ಕರ್ಪೂರದ ಕಟ್ಟೆ ಗ್ರಾಮದಲ್ಲಿ ನಡೆದಿದ್ದು, ನಾಲ್ಕು ಜನ ದರೋಡೆಕೋರರಿಂದ ಚಂದ್ರಶೇಖರ್ ಎಂಬುವರ ಮನೆಗೆ ನುಗ್ಗಿ ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 80 ಸಾವಿರ ನಗದು, 200 ಗ್ರಾಂ ಚಿನ್ನಾಭರಣ ದೋಚಿ ಖದೀಮರು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.