ಮಹಾದಾಯಿ ಎರಡು ಪರಿಹಾರ ಮಾರ್ಗ ಸೂಚಿಸಿದ ಕುಮಾರಸ್ವಾಮಿ

ಗುರುವಾರ, 28 ಡಿಸೆಂಬರ್ 2017 (20:44 IST)
ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಕೇವಲ ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿವಾದಕ್ಕಿರುವ ಎರಡು ಪರಿಹಾರಗಳನ್ನು ಸೂಚಿಸಿದ್ದಾರೆ.
 
ಒಂದನೇ ಪರಿಹಾರ ಮಾರ್ಗ ಪ್ರಧಾನಿ ಮಧ್ಯಸ್ಥಿಕೆ ವಹಿಸಿ, ರಾಜ್ಯಕ್ಕೆ 7.56 ಟಿಎಂಸಿ ನೀರು ಬಳಕೆ ಮಾಡಲು ಆದೇಶಿಸಬೇಕು. ಎರಡನೇಯದು ಅಂದರೆ ಮೂರೂ ರಾಜ್ಯಗಳು ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸಿ, ನೀರು ಬಿಡುಗಡೆಗೆ ಅಭ್ಯಂತರ ಇಲ್ಲ ಎಂದು ಹೇಳಬೇಕು ಎಂದಿದ್ದಾರೆ.
 
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು, ಯಡಿಯೂರಪ್ಪ ಅವರಿಗೆ ಪತ್ರ ಬರೆಯುವುದರಿಂದ ಪರಿಹಾರ ದೊರೆಯುವುದಿಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸಂವಿಧಾನ ಬದಲಾವಣೆ ಮಾಡಿದರೆ ದಂಗೆ– ಸಿದ್ದರಾಮಯ್ಯ