Publish Date: Sat, 23 Dec 2017 (08:08 IST)
Updated Date: Sat, 23 Dec 2017 (08:13 IST)
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಲು ಮಹದಾಯಿ ಹೋರಾಟಗಾರರು ನವಲಗುಂದದಿಂದ ಬೆಂಗಳೂರಿಗೆ ಬಂದಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸಿಎಂ ಪರಿಕ್ಕರ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದ ಹಿನ್ನಲೆಯಲ್ಲಿ 300 ಕ್ಕೂ ಹೆಚ್ಚು ಮಹದಾಯಿ ಹೋರಾಟಗಾರರು ಮಲ್ಲೇಶ್ವರಂ ನ ಬಿಜೆಪಿ ಕಚೇರಿಯ ಎದುರು ತಮ್ಮ ಮನವಿ ಸಲ್ಲಿಸಲಿದ್ದಾರೆ.
ಬಿಎಸ್ ವೈ ಅವರ ಪ್ರಯತ್ನಕ್ಕೆ ಒಳ್ಳೆಯ ಬೆಳವಣಿಗೆ ಸಿಕ್ಕಿದ್ದು ನೀರು ಹಂಚಿಕೆ ಬಗ್ಗೆ ಮಾತುಕತೆಗೆ ಸಿಎಂ ಕೂಡ ಒಪ್ಪಿದ್ದು ಬಿಎಸ್ ವೈ ಅವರೇ ಈ ವಿವಾದ ಬಗೆಹರಿಸಬೇಕೆಂದು ಮನವಿ ಸಲ್ಲಿಸಲು ಬಂದಿರುವುದಾಗಿ ಹೋರಾಟಗಾರರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯ ಎದುರು ಎಎಸ್ಪಿ ಎ.ಆರ್.ಬಡೀಗರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ