Publish Date: Tue, 23 Jan 2018 (13:07 IST)
Updated Date: Tue, 23 Jan 2018 (13:09 IST)
ಮಹಾದಾಯಿ ನೀರಾವರಿ ಯೋಜನೆ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಹೋರಾಟಗಾರರು ಕಾಂಗ್ರೆಸ್ ಪ್ರೇರಿತರಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯ ಮುಂದೆ ಹೋರಾಟ ಮಾಡಿದವರು ಕಾಂಗ್ರೆಸ್ ಪಕ್ಷದ ಬೆಂಬಲಿಗರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹದಾಯ ನೀರಾವರಿ ಯೋಜನೆ ಕುರಿತಂತೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಹಾಲಿ ಅಧ್ಯಕ್ಷ ರಾಹುಲ್ ಗಾಂಧಿ ಏನ್ ಮಾಡಿದ್ದಾರೆ ಎಂದು ಪ್ರಶ್ನಿಸಿದ ಅವರು, ಸಿಎಂ ಸಿದ್ದರಾಮಯ್ಯ ಬೆಂಬಲದಿಂದ ಹೋರಾಟಗಾರರು ಜನೆವರಿ 25 ರಂದು ಬಂದ್‌ಗೆ ಕರೆ ನೀಡಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದ ಕನ್ನಡ ಪರ ಸಂಘಟನೆಗಳು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುವ ದಿನದಂದು ಬಂದ್‌ಗೆ ಕರೆ ನೀಡಿವೆ. ಸರಕಾರ ಪರೋಕ್ಷವಾಗಿ ಕನ್ನಡ ಪರ ಹೋರಾಟಗಾರರಿಗೆ ಬೆಂಬಲಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.