Publish Date: Fri, 29 Dec 2017 (15:30 IST)
Updated Date: Fri, 29 Dec 2017 (15:32 IST)
ಮಹಾದಾಯಿ ವಿವಾದ ಇತ್ಯಾರ್ಥಪಡಿಸಲು ಬಿಜೆಪಿಗೆ ನಿಜಕ್ಕೂ ಕಾಳಜಿ ಇದ್ದರೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ಸಲ್ಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕೋಲಾರ ಜಿಲ್ಲೆಯ ಬಾಗೆಪಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರಿಗೆ ಸ್ವಲ್ಪವಾದರೂ ಕಾನೂನಿನ ಜ್ಞಾನ ಇದೆಯೇ? ಒಂದು ರಾಜ್ಯದ ಮುಖ್ಯಮಂತ್ರಿ ಮತ್ತೊಂದು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯುವುದು ಶಿಷ್ಟಾಚಾರ. ಆದರೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿಯವರಿಗೆ ತಾಕತ್ತು ಇದ್ದರೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ಸಲ್ಲಿಸಲಿ ಎಂದಿದ್ದಾರೆ.
ಯಡಿಯೂರಪ್ಪ ಒಂದು ರಾಜಕೀಯ ಪಕ್ಷದ ರಾಜ್ಯಾಧ್ಯಕ್ಷ ಮಾತ್ರ. ಅವರಿಗೆ ಪತ್ರ ಬರೆದ ಗೋವಾ ಸಿಎಂ ಪರಿಕ್ಕರ್ ಅವರಿಗೆ ಸಭ್ಯತೆ ಇಲ್ಲ. ಶಿಷ್ಟಾಚಾರ ಉಲ್ಲಂಘಿಸಿ ತಮ್ಮ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
Hanumanthu.P
Publish Date: Fri, 29 Dec 2017 (15:30 IST)
Updated Date: Fri, 29 Dec 2017 (15:32 IST)