Select Your Language

Notifications

webdunia
webdunia
webdunia
webdunia

ರಾಜ್ಯಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರು

ರಾಜ್ಯಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಕಾರ್ಯಕರ್ತರು
ಬೆಂಗಳೂರು , ಶನಿವಾರ, 30 ಜುಲೈ 2016 (11:00 IST)
ಮಹದಾಯಿ ಮಧ್ಯಂತರ ತೀರ್ಪು ವಿರೋಧಿಸಿ ಇಂದು ಕರ್ನಾಟಕ ರಾಜ್ಯ ಬಂದ್‌ಗೆ ಕರೆ ನೀಡಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
 
ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಮಹಿಳಾ ಪೊಲೀಸರು ಅರನ್ನು ತಡೆದಿದ್ದಾರೆ. ಈ ವೇಳೆ ನಡುರಸ್ತೆಯಲ್ಲಿಯೇ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಕಾರ್ಯಕರ್ತರು ಮತ್ತು ಮಹಿಳಾ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
 
ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪೊಲೀಸರು 25 ಪ್ರತಿಭಟನಾ ನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. 
 
ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಕನ್ನಡ ಪರ ಸೇಘಟನೆಗಳು ಇಂದು ರಾಜ್ಯ ಬಂದ್‌ಗೆ ಕರೆ ನೀಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನಾ ನಿರತರ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಪ್ರಜಾಪುಭುತ್ವ ಇದ್ಯಾ?: ಎನ್‌.ಎಚ್‌.ಕೋನರೆಡ್ಡಿ