ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿ ವಜಾ ಹಿನ್ನೆಲೆಯಲ್ಲಿ ಇಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ವಕೀಲರ ಜೊತೆ ಚರ್ಚೆ ನಡೆಸಿ, ಮುಂದಿನ ಕಾನೂನು ಹೋರಾಟದ ಕುರಿತು ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ಮಹದಾಯಿ ನದಿ ನೀರು ಹಂಚಿಕೆ ವಿವಾದ ಕುರಿತು ರಾಜ್ಯದ ಪರ ವಾದ ಮಂಡಸಿದ್ದ ಮೋಹನ ಕಾತರಕಿ, ನಿಶಾಂತ್ ಪಾಟೀಲ್ ಸೇರಿದಂತೆ ಹಿರಿಯ ವಕೀಲರು ಹಾಗೂ ಅಧಿಕಾರಿಗಳ ಜೊತೆ ದೆಹಲಿಯ ಕರ್ನಾಟಕ ಭವನದಲ್ಲಿ ಚರ್ಚೆ ನಡೆಸಿದ್ದು, ಮುಂದಿನ ಕಾನೂನ ಹೋರಾಟದ ಕುರಿತು ನಿರ್ಧರಿಸಲಿದ್ದು, ನಂತರ ಹಿರಿಯ ವಕೀಲ ನಾರಿಮನ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರಕಾರ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು.
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ