Select Your Language

Notifications

webdunia
webdunia
webdunia
webdunia

ಮಹದಾಯಿ ನ್ಯಾಯಾಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯ: ಕರವೇ

ಮಹದಾಯಿ ನ್ಯಾಯಾಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯ: ಕರವೇ
ಬೆಂಗಳೂರು , ಬುಧವಾರ, 27 ಜುಲೈ 2016 (17:30 IST)
ಮಹದಾಯಿ ನ್ಯಾಯಾಧಿಕರಣದ ತೀರ್ಪು ರಾಜ್ಯಕ್ಕೆ ದೊಡ್ಡ ಅನ್ಯಾಯ ಮಾಡಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಶಾಂತಿಯಿಂದ ಹೋರಾಟ ಮಾಡಲಾಗುತ್ತಿತ್ತು. ಆದರೆ, ಇನ್ನೂ ಮುಂದೆ ಕ್ರಾಂತಿಯಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
 
ಕೇಂದ್ರ, ಮಹರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಪ್ರಧಾನಿ ಮೋದಿ ಅವರನ್ನು ಕರೆದು ಕಿವಿ ಹಿಂಡಬಹುದಿತ್ತು. ರಾಜ್ಯದ ಜನತೆ ಕುಡಿಯಲು ನೀರು ಕೇಳುತ್ತಿದ್ದಾರೆ. ಕೇಂದ್ರ ಸರಕಾರ ಮಹದಾಯಿ ವಿಷಯದಲ್ಲಿ ವಿಶ್ವಾಸ ದ್ರೋಹವೆಸಗಿದೆ. ಕನ್ನಡಿಗರ ಇನ್ನೊಂದು ಮುಖವನ್ನು ನಾವು ತೋರಿಸುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಡಾ.ಕಲಾಂ ಪುಣ್ಯತಿಥಿ ಸಮಾರಂಭದಲ್ಲಿ ಗೌರವ ಸಲ್ಲಿಸಿದ ಸೋನಿಯಾ ಗಾಂಧಿ