Publish Date: Tue, 26 Jul 2016 (19:02 IST)
Updated Date: Tue, 26 Jul 2016 (19:04 IST)
ನಾಳೆ ಹೊರಬೀಳಲಿರುವ ಮಹದಾಯಿ ನದಿ ವಿವಾದದ ಮಧ್ಯಂತರ ತೀರ್ಪು ರಾಜ್ಯದ ಪರವಾಗಿ ಬರುವ ವಿಶ್ವಾಸವಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೃಷ್ಣಾ ಭಾಗ್ಯ ಜಲ ನಿಗಮದ ನಿರ್ದೇಶಕ ಮಂಡಳಿಯ ಸಭೆಗೂ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ವಿವಾದದ ಮಧ್ಯಂತರ ತೀರ್ಪು ರಾಜ್ಯದ ಪರವಾಗಿ ಬರುವ ವಿಶ್ವಾಸ ವ್ಯಕ್ತಪಡಿಸಿದ್ದು, ನಾಳಿನ ತೀರ್ಪು ರಾಜ್ಯದ ಪರವಾಗಿ ಬರಲಿ ಎಂದು ಪ್ರಾರ್ಥಿಸೋಣ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಲ ಭಾಗ್ಯ ನಿಗಮದ ಕಾಮಗಾರಿಗಳ ಅಭಿವೃದ್ಧಿ, ಬಾಕಿ ಇರುವ ಕಾಮಗಾರಿಗಳು ಹಾಗೂ ಹಣಕಾಸಿನ ಲಭ್ಯತೆ ಕುರಿತು ಚರ್ಚೆ ನಡೆಸಲಾಯಿತು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.