ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕಕ್ಕೆ ಹಿನ್ನೆಡೆ ಹಿನ್ನೆಲೆಯಲ್ಲಿ ರಾಜ್ಯ ಸಂಸದರ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹಾಕಲಿ ಅಥವಾ ರಾಜೀನಾಮೆ ನೀಡಿ ತೆರಳಲಿ ಎಂದು ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನೀರು ಹಂಚಿಕೆ ವಿಚಾರವಾಗಿ ರಾಜ್ಯ ಸಂಸದರು ಆಸಕ್ತಿ ವಹಿಸುತ್ತಿಲ್ಲ. ಅವರು ಕೂಡಲೇ ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ಹಾಕಬೇಕಾಗಿದೆ. ಇಲ್ಲವಾದಲ್ಲಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಡಲಿ ಎಂದು ಆಗ್ರಹಿಸಿದ್ದಾರೆ.
ಮಹದಾನಿ ನೀರು ಹಂಚಿಕೆಗೆ ಸಂಬಂದಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯ ಪ್ರವೇಶಿಸಿ ರೈತರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಾರಿ ಹಿನ್ನೆಡೆಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ