Publish Date: Wed, 27 Dec 2017 (16:54 IST)
Updated Date: Wed, 27 Dec 2017 (16:55 IST)
ಮಹಾದಾಯಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸುಳ್ಳು ಹೇಳುತ್ತಿದ್ದಾರೆ. ಅವರಿಂದ ನೀರು ಬಿಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಳಲ್ಕೆರೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಮಹಾದಾಯಿ ವಿವಾದವನ್ನು ರಾಜಕೀಯಕ್ಕೆ ಬಳಕೆ ಮಾಡಲಾಗುತ್ತಿದೆ. ಆದರೆ, ನಾವು ರಾಜಕೀಯ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಗೋವಾದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇವೆ. ಈ ಸಂಬಂಧ ಚರ್ಚಿಸಲು ಸಭೆ ಕರೆದರೆ ಅದರಲ್ಲಿ ಪಾಲ್ಗೊಳ್ಳಲು ಸಿದ್ಧ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.